ಹಾಸನ : ಹಾಸನದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜಾತಿ ಗಣತಿಗೆ ತೆರಳಿದ್ದ ಶಿಕ್ಷಕ ಮೇಲೆ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಹಾಸನದ ಬೇಲೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಬೀದಿ ನಾಯಿಗಳು ದಾಳಿ ಮಾಡಿದಾಗ, ಶಿಕ್ಷಕಿ ಬಚಾವ್ ಮಾಡಲು ಹೋಗಿದ್ದವರ ಮೇಲು ಕೂಡ ನಾಯಿಗಳು ದಾಳಿ ಮಾಡಿದೆ.
ಶಿಕ್ಷಕಿ ಸೇರಿದಂತೆ ಒಟ್ಟು 7 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಶಿಕ್ಷಕಿ ಚಿಕ್ಕಮಗೆ ತೀವ್ರವಾದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೈ, ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ ಶಿಕ್ಷಕಿ ಚಿಕ್ಕಮಗೆ ಗಂಭೀರವಾದ ಗಾಯಗಳಾಗಿವೆ. ಆಸ್ಪತ್ರೆಗೆ ಶಾಸಕ ಸುರೇಶ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.