ಥಾಣೆ : ಬಾಳಾಸಾಹೆಬಂಚಿ ಶಿವಸೇನಾ ನಾಯಕಿ ವಂದನಾ ಡೋಂಗ್ರೆ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲಾಗಿದೆ.
ಗಾಂಧಿಯವರ ಹೇಳಿಕೆಯಿಂದ ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 500, 501 ರ ಅಡಿಯಲ್ಲಿ ನಾನ್-ಕಾಗ್ನಿಜೇಬಲ್ (ಎನ್ಸಿಆರ್) ಅಪರಾಧದ ಪ್ರಕರಣವನ್ನು ದಾಖಲಿಸಲಾಗಿದೆ. ಮಹಾರಾಷ್ಟ್ರದ ಅಕೋಲಾದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರಿಗೆ ಕ್ಷಮೆಯಾಚಿಸುವ ಪತ್ರಕ್ಕೆ ಸಹಿ ಹಾಕುವ ಮೂಲಕ ಸಾವರ್ಕರ್ ಅವರು ಎಂಕೆ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ಅವರಂತಹ ನಾಯಕರಿಗೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು.
ವೀರ ಸಾವರ್ಕರ್ ಅವರು ಬ್ರಿಟಿಷರಿಗೆ ಬರೆದ ಪತ್ರದಲ್ಲಿ ” ಆಂಗ್ಲರ ಅತ್ಯಂತ ವಿಧೇಯ ಸೇವಕರಾಗಿ ಉಳಿಯಲು ಬೇಡಿಕೊಳ್ಳುತ್ತಾರೆ” ಇದಲ್ಲದೇ ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದರು ಅಂತ ಆರೋಪಿಸಿದ್ದಾರೆ. “ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರನ್ನು ಅವಮಾನಿಸುವ ಹೇಳಿಕೆ ನೀಡಿದ್ದರು ಮತ್ತು ಇದರಿಂದಾಗಿ ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ” ಎಂದು ಡೋಂಗ್ರೆ ಹೇಳಿದ್ದಾರೆ.