ಅಹ್ಮದಾಬಾದ್: ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು ಮುಂಬೈನಿಂದ ಚಲನಚಿತ್ರ ನಿರ್ಮಾಪಕ ಅವಿನಾಶ್ ದಾಸ್ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
HEALTH TIPS: ಕ್ಯಾನ್ಸರ್ ರೋಗಿಗಳಲ್ಲಿ ವಿಟಮಿನ್ ಡಿ ಕೊರತೆ 3 ಪಟ್ಟು ಹೆಚ್ಚುತ್ತಂತೆ: ಅಧ್ಯಯನ
ಮುಂದಿನ ಕ್ರಮಕ್ಕಾಗಿ ಅವರನ್ನು ಅಹಮದಾಬಾದ್ ಗೆ ಕರೆತರಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
“ನಾವು ಮುಂಬೈನಿಂದ ದಾಸ್ ಅವರನ್ನು ಬಂಧಿಸಿದ್ದೇವೆ. ಹೆಚ್ಚಿನ ಕಾನೂನು ಪ್ರಕ್ರಿಯೆಗಾಗಿ ಅವರನ್ನು ನಮ್ಮ ತಂಡವು ಅಹಮದಾಬಾದ್ಗೆ ಕರೆತರುತ್ತಿದೆ” ಎಂದು ನಗರ ಅಪರಾಧ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಡಿ.ಪಿ.ಚುಡಾಸಮಾ ತಿಳಿಸಿದ್ದಾರೆ.
ಅಹ್ಮದಾಬಾದ್ ಅಪರಾಧ ವಿಭಾಗವು ಮುಂಬೈ ಮೂಲದ ಚಲನಚಿತ್ರ ನಿರ್ಮಾಪಕರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 469 (ಫೋರ್ಜರಿ) ದೂರು ದಾಖಲಿಸಿದ್ದಾರೆ.
HEALTH TIPS: ಕ್ಯಾನ್ಸರ್ ರೋಗಿಗಳಲ್ಲಿ ವಿಟಮಿನ್ ಡಿ ಕೊರತೆ 3 ಪಟ್ಟು ಹೆಚ್ಚುತ್ತಂತೆ: ಅಧ್ಯಯನ
ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ. ಏಕೆಂದರೆ ಅವರು ತಮ್ಮ ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಖಾತೆಗಳಲ್ಲಿ ರಾಷ್ಟ್ರಧ್ವಜವನ್ನು ಧರಿಸಿದ ಮಹಿಳೆಯ ಮತ್ತೊಂದು ಫೋಟೋವನ್ನು ಪೋಸ್ಟ್ ಮಾಡಿದ್ದರು.