ಬೆಂಗಳೂರು: ಕರ್ನಾಟಕ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ದಿನಾಂಕ 28-02-2026ರಿಂದ 17-03-2026ರವರೆಗೆ ನಡೆದರೇ, ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 18-03-2026 ರಿಂದ 02-04-2026ರವರೆಗೆ ನಡೆಯಲಿದೆ.
ಹೀಗಿದೆ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ವೇಳಾಪಟ್ಟಿ:
ಫೆಬ್ರವರಿ 28: ಕನ್ನಡ, ಅರೇಬಿಕ್
ಮಾರ್ಚ್ 2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3: ಇಂಗ್ಲಿಷ್
ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5: ಇತಿಹಾಸ
ಮಾರ್ಚ್ 6: ಭೌತಶಾಸ್ತ್ರ
ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10: ಅರ್ಥಶಾಸ್ತ್ರ
ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12: ಹಿಂದಿ
ಮಾರ್ಚ್ 13: ರಾಜ್ಯಶಾಸ್ತ್ರ
ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17: ಹಿಂದುಸ್ತಾನಿ ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ
ಹೀಗಿದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ:
ಮಾರ್ಚ್ 18: ಪ್ರಥಮ ಭಾಷೆ
ಮಾರ್ಚ್ 23: ವಿಜ್ಞಾನ
ಮಾರ್ಚ್ 25: ದ್ವಿತೀಯ ಭಾಷೆ
ಮಾರ್ಚ್ 28: ಗಣಿತ
ಮಾರ್ಚ್ 30: ತೃತೀಯ ಭಾಷೆ
ಏಪ್ರಿಲ್ 2: ಸಮಾಜ ವಿಜ್ಞಾನ









