ಧಾರವಾಡ: ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ನವೆಂಬರ್ 01, 2025 ಕ್ಕೆ ಅನ್ವಯವಾಗುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪಧವೀದರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರಕಟಿಸಲು ನಿರ್ದೇಶನ ನೀಡಲಾಗಿತ್ತು. ಅದರಂತೆ, ನವೆಂಬರ್ 25, 2025 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ.
ನವೆಂಬರ್ 25, 2025 ರಿಂದ ಡಿಸೆಂಬರ್ 10, 2025 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಸದರಿ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳ ಪರಿಶೀಲನೆಯ ನಂತರ, ಪಶ್ಚಿಮ ಪಧವೀದರರ ಮತಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30, 2025 ರಂದು ಪ್ರಕಟಿಸಲಾಗಿದೆ.
ಅಂತಿಮ ಮತದಾರರ ಪಟ್ಟಿಯು ಮತದಾರರ ನೋಂದಣಿ ಅಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳು ಧಾರವಾಡ, ಗದಗ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆ ಇವರ ಕಚೇರಿಯಲ್ಲಿ ಹಾಗೂ ಅವರ ವ್ಯಾಪ್ತಿಯಲ್ಲಿ ಬರುವ ಎಲ್ಲ ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿರುತ್ತದೆ. ಅದೇ ರೀತಿ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಇವರ www.ceokarnataka.kar.nic.in ವೆಬ್ ಸೈಟ್‍ನಲ್ಲಿ ಹಾಗೂ ಈ ಕಾರ್ಯಾಲಯದ ವೆಬ್‍ಸೈಟ್ https://rcbelagavi.karnataka.gov.in ನಲ್ಲಿಯೂ ಕೂಡಾ ಲಭ್ಯವಿರುತ್ತದೆ.
ಪಶ್ಚಿಮ ಪಧವೀದರರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 51,599 ಪುರುಷ ಮತದಾರರು ಮತ್ತು 36,488 ಮಹಿಳಾ ಮತದಾರರು ಸೇರಿದಂತೆ ಒಟ್ಟು 88,087 ಮತದಾರರು ಇರುತ್ತಾರೆ.
ಅಂತಿಮ ಮತದಾರರ ಪಟ್ಟಿಯಲ್ಲಿ ತಪ್ಪಿಹೋದ ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಲು ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕಕ್ಕೆ 10 ದಿನಗಳ ಮೊದಲು ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ಮತದಾರರ ನೋಂದಣಿ ಹಾಗೂ ನವೀಕರಣ ಪ್ರಕ್ರಿಯೆ ನಿರಂತರವಾಗಿ ನಡೆಯುವುದು ಎಂದು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರಾದ ಕೆ. ಎಮ್. ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ಘರ್ಷಣೆ, ಫೈರಿಂಗ್ ಕೇಸ್: ‘SP ಪವನ್ ನೆಜ್ಜುರ್’ ಸಸ್ಪೆಂಡ್








