ನವದೆಹಲಿ: ಲೋಕಸಭೆಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ 2024-25 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸೋದಕ್ಕೆ ಆರಂಭಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಹೆಚ್ಚಿನ ಹಣದುಬ್ಬರ ಮತ್ತು ಮೃದು ಜಾಗತಿಕ ಮಂದಗತಿಯ ನಡುವೆ ಬಜೆಟ್ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಮಾರ್ಗದರ್ಶನವನ್ನು ನೀಡುತ್ತದೆ.
ಮೋದಿಯವರ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಹಿನ್ನಲೆಯಲ್ಲಿ ನಾನು ಕೇಂದ್ರ ಬಜೆಟ್ 2024-25 ಮಂಡಿಸುತ್ತಿರೋದಾಗಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದ ಆರಂಭದಲ್ಲೇ ಹೇಳಿದರು.
ಇದಕ್ಕೂ ಮುನ್ನಾ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸುವ ಮೊದಲು ಕೇಂದ್ರ ಸಚಿವ ಸಂಪುಟವು ಮಧ್ಯಂತರ ಬಜೆಟ್ ಗೆ ಅನುಮೋದನೆಯನ್ನು ಪಡೆದರು.