ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ತನಿಖಾ ತಂಡಗಳು ಏಪ್ರಿಲ್-2026ರ ಮಾಹೆಯಲ್ಲಿ ರಾಜ್ಯಾದ್ಯಂತ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಿದ್ದು, ಟಿಕೆಟ್ ರಹಿತ ಪ್ರಯಾಣಿಕರಿಗೆ ಭಾರಿ ದಂಡ ವಿಧಿಸಿವೆ.
ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ ಒಟ್ಟು 41,308 ವಾಹನಗಳನ್ನು ತೀವ್ರ ತನಿಖೆಗೊಳಪಡಿಸಿದ ಅಧಿಕಾರಿಗಳು, 4,337 ಕಳ್ಳಪ್ರಯಾಣದ ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 4,462 ಪ್ರಯಾಣಿಕರಿಂದ ಒಟ್ಟು 8,67,590/- ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ.
ಆದಾಯ ಸೋರಿಕೆ ಪತ್ತೆ ಮತ್ತು ಶಿಸ್ತು ಕ್ರಮ: ನಿಗಮದ ಆದಾಯಕ್ಕೆ ಕತ್ತರಿ ಬೀಳುತ್ತಿದ್ದ 1,32,973/- ರೂ.ಗಳ ಆದಾಯ ಸೋರಿಕೆಯನ್ನು ತನಿಖಾಧಿಕಾರಿಗಳು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಈ ಅಕ್ರಮ ಮತ್ತು ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಸಿಬ್ಬಂದಿಗಳ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತು ಕ್ರಮಗಳನ್ನು ಜರುಗಿಸಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.
ಪ್ರಯಾಣಿಕರಲ್ಲಿ ನಿಗಮದ ಮನವಿ: > ಸಾರ್ವಜನಿಕ ಪ್ರಯಾಣಿಕರು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಜವಾಬ್ದಾರಿಯುತವಾಗಿ ಸರಿಯಾದ ಟಿಕೆಟ್ ಅಥವಾ ಪಾಸುಗಳನ್ನು ಪಡೆದೇ ಪ್ರಯಾಣಿಸಬೇಕು. ಆ ಮೂಲಕ ನಿಗಮದೊಂದಿಗೆ ಸಹಕರಿಸಬೇಕಾಗಿ ಕೆ.ಎಸ್.ಆರ್.ಟಿ.ಸಿ ಈ ಮೂಲಕ ಪ್ರಕಟಣೆಯಲ್ಲಿ ಕೋರಿದೆ.
ಭಾರತದಲ್ಲಿ ಬೇಸ್ಬಾಲ್ ಜನಪ್ರಿಯಗೊಳಿಸಲು ‘ರಿಲಯನ್ಸ್ನ ರೈಸ್ ವರ್ಲ್ಡ್ವೈಡ್’ನೊಂದಿಗೆ ಕೈಜೋಡಿಸಿದ ಎಂಎಲ್ಬಿ
JOB ALERT: ರಾಜ್ಯದ ವಿವಿಧ ಇಲಾಖೆ, ನಿಗಮಗಳಲ್ಲಿ ಖಾಲಿ ಇರುವ ‘ಎಂಜಿನಿಯರ್ ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ








