ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತ್ರಗಳನ್ನು ಬಳಸಿಕೊಂಡು ಎಕ್ಸ್ ನಲ್ಲಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದಕ್ಕಾಗಿ ಆಮ್ ಆದ್ಮಿ ಪಕ್ಷ (Aam Aadmi Party -AAP) ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಸೋಮವಾರ ಎಫ್ಐಆರ್ ದಾಖಲಿಸಲಾಗಿದೆ.
ದೆಹಲಿ ಬಿಜೆಪಿ ಘಟಕದ ಕಾರ್ಯದರ್ಶಿ ಬ್ರಿಜೇಶ್ ರಾಯ್ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ( Prime Minister Narendra Modi and Union Home Minister Amit Shah ) ಅವರ ಚಿತ್ರಗಳನ್ನು ಬಳಸಿದ ವಿವಿಧ ಟ್ವೀಟ್ಗಳನ್ನು ಉಲ್ಲೇಖಿಸಿ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ವಿಶೇಷವೆಂದರೆ, ಫೆಬ್ರವರಿ 5 ರಂದು ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಫೆಬ್ರವರಿ 8ರಂದು ಫಲಿತಾಂಶ ಹೊರಬೀಳಲಿದೆ.
Crime News: ಎಣ್ಣೆ ಏಟಲ್ಲಿ ಅತ್ತೆ ಕಥೆ ಮುಗಿಸಿದ ಅಳಿಯ: ಎಳ್ಳುಬೆಲ್ಲ ಕೊಡಲು ಹೋಗಿ ಚಾಕುವಿನಿಂದ ಇರಿದು ಹತ್ಯೆ
‘ಸ್ವರ್ಣ ಪ್ರಾಶನ’ ಮಕ್ಕಳ ಸದೃಢ ಆರೋಗ್ಯಕ್ಕೆ ಸಹಕಾರಿಯೇ? ಇಲ್ಲಿದೆ ಸಂಪೂರ್ಣ ಮಾಹಿತಿ | Swarna Bindu Prashana