ಬೆಂಗಳೂರು: ಕಾಂಗ್ರೆಸ್ ಮತ್ತು ಪಕ್ಷೇತರ ಶಾಸಕರಿಗೆ ಆಮಿಷ ಹಾಗೂ ಬೆದರಿಕೆ ಆರೋಪದಡಿ ರಾಜ್ಯಸಭಾ ಚುನಾವಣೆಯ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಜ್ಯಸಭಾ ಚುನಾವಣಾ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಹಾಗೂ ಇತರರು ಕಾಂಗ್ರೆಸ್ ಮತ್ತು ಪಕ್ಷೇತರ ಶಾಸಕರಿಗೆ ಆಮಿಷ, ಬೆದರಿಕೆ ಹಾಕುತ್ತಿದ್ದಾರೆ ಎಂಬುದಾಗಿ ಪೊಲೀಸ್ ಕಮೀಷನರ್ ಅವರಿಗೆ ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಅವರು ದೂರು ನೀಡಿದ್ದರು. ಈ ದೂರನ್ನು ವಿಧಾನಸೌಧ ಠಾಣೆಗೆ ವರ್ಗಾಯಿಸಲಾಗಿತ್ತು.
ಶಾಸಕ ರವಿಕುಮಾರ್ ಗಣಿಗ ಅವರ ದೂರಿನ ಹಿನ್ನಲೆಯಲ್ಲಿ ವಿಧಾನಸೌಧ ಠಾಣೆಯಲ್ಲಿ ಕುಪೇಂದ್ರ ರೆಡ್ಡಿ, ಕ್ರೆಸೆಂಟ್ ಹೋಟೆಲ್ ಮಾಲೀಕ ರವಿ, ಡಾ.ಮಹಂತೇಶ್ ಹಾಗೂ ಹರಿಹರದ ಮಾಜಿ ಶಾಸಕ ಶಿವಶಂಕರ್ ವಿರುದ್ಧ ಐಪಿಸಿ ಸೆಕ್ಷನ್ 171ಇ, 506, 171ಎಫ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಅಂದಹಾಗೇ ರವಿಕುಮಾರ್ ಗಣಿಗ ನೀಡಿದಂತ ದೂರಿನಲ್ಲಿ ಕುಪೇಂದ್ರ ರೆಡ್ಡಿ ಹಾಗೂ ಇತರರು ಹರಪನಹಳ್ಳಿ ಪಕ್ಷೇತ್ರ ಶಾಸಕಿ ಎಂ.ಪಿ ಲತಾ, ಗೌರಿಬಿದನೂರು ಪಕ್ಷೇತರ ಶಾಸಕ ಪುಟ್ಟಸ್ವಾಮಿ ಹಾಗೂ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ ಸೇರಿದಂತೆ ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ. ಬೆದರಿಕೆ ಹಾಕುತ್ತಿದ್ದಾರೆ ಎಂಬುದಾಗಿ ಆರೋಪಿಸಲಾಗಿತ್ತು.
‘CBSE 9 ರಿಂದ 12ನೇ ತರಗತಿ ವಿದ್ಯಾರ್ಥಿ’ಗಳಿಗೆ ‘ಓಪನ್ ಬುಕ್ ಪರೀಕ್ಷೆ’ : ವರದಿ
BIG Alert: ಪೋಷಕರೇ..! ನೀವು ಮಕ್ಕಳಿಗೆ ‘ಬಾಂಬೆ ಮಿಠಾಯಿ’ ಕೊಡಿಸ್ತಾ ಇದ್ದೀರಾ.? ಇಲ್ಲಿದೆ ‘ಶಾಕಿಂಗ್ ನ್ಯೂಸ್’