ಚಿಕ್ಕಮಗಳೂರು: ಈಗಾಗಲೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಧರ್ಮ ದ್ವೇಷ ಭಾಷಣದ ಕಾರಣ ಚುನಾವಣಾ ಆಯೋಗ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಬೆನ್ನಲ್ಲೇ ದ್ವೇಷ ಭಾಷಣ ಮಾಡಿದಂತ ಬಿಜೆಪಿ ಮುಖಂಡ ಸಿ.ಟಿ ರವಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಈ ಕುರಿತಂತೆ ಎಕ್ಸ್ ನಲ್ಲಿ ಚುನಾವಣಾ ಆಯೋಗವು ಪೋಸ್ಟ್ ಮಾಡಿದ್ದು, ವಿವಿಧ ವರ್ಗದ ನಾಗರಿಕರ ನಡುವೆ ದ್ವೇಷ ಮತ್ತು ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 125 ಮತ್ತು ಐಪಿಸಿಯ 505 (2) ರ ಅಡಿಯಲ್ಲಿ ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರು ಚುನಾವಣಾ ಅಧಿಕಾರಿಗಳು ಎಫ್ಐಆರ್ (ಸಂಖ್ಯೆ 0042/2024) ದಾಖಲಿಸಿದ್ದಾರೆ ಎಂದಿದೆ.

ಇನ್ಮುಂದೆ ವರ್ಷಕ್ಕೆ ಎರಡು ಬಾರಿ ‘CBSE’ ಬೋರ್ಡ್ ಪರೀಕ್ಷೆ : ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ ಸಾಧ್ಯತೆ

Share.
Exit mobile version