ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪದಡಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ 11 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಿನ್ನೆ ರಾತ್ರಿ ಶಕ್ತಿ ನಗರದ ಪದವು ದೇವಸ್ಥಾನದ ಬಳಿಯಲ್ಲಿ ಗಲಾಟೆ ನಡೆದಿತ್ತು. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಮಾಡಲಾಗಿತ್ತು. ಏಳೆಂಟು ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾಗಿ ಆರೋಪಿಸಿದ್ದಾರೆ.
ಶ್ರೀಕೃಷ್ಣ ಭಜನಾಮಂಡಳಿಯ ಬ್ರಹ್ಮೋತ್ಸವದ ಹಿನ್ನಲೆಯಲ್ಲಿ ಐವಾನ್ ಡಿಸೋಜಾ ಬರ್ತಾರೆಂದು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ಈ ವೇಳೆ ಅಲ್ಲಿಗೆ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಆಗಮಿಸಿದ್ದರು. ದೇಗುಲಕ್ಕೆ ಕಲ್ಲು ಹೊಡೆಯುವವರಿಗೆ ಇಲ್ಲೇನು ಕೆಲಸ ಎಂಬುದಾಗಿ ಅವಹೇಳನ ಮಾಡಿದ್ದರು.
ಶಾಸಕರ ಮಾತಿನಿಂದ ಸ್ಥಳದಲ್ಲಿ ಗಲಾಟೆಯಾಗಿತ್ತು. ಈ ವೇಳೆ ಅವನ ಕೈಕಾಲು ಮುರಿಯಿರಿ ಅಂತ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ ಎಂಬುದಾಗಿ ಆರೋಪಿಸಲಾಗಿತ್ತು. ಶಾಸಕರ ಪ್ರಚೋದನೆಯಿಂದ ಹಲ್ಲೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ 11 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಡಿ.ಕೆ ಶಿವಕುಮಾರ್ ಸಿನಿಮಾದವರಿಗೆ ವಾರ್ನಿಂಗ್ ಕೊಟ್ಟಿಲ್ಲ, ಹೇಳಿದ್ದರಲ್ಲಿ ತಪ್ಪಿಲ್ಲ: ನಟ ಸಾಧು ಕೋಕಿಲ