ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ವಿರುದ್ಧ ಎಫ್ಐ ಆರ್ ದಾಖಲು ವಿಚಾರವಾಗಿ ಬೆಂಗಳೂರಿನಲ್ಲಿ ಬಿ. ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಕೋರ್ಟ್ ನಲ್ಲಿ ಏನು ತೀರ್ಮಾನವಾಗುತ್ತದೆ ನೋಡಬೇಕು ಎಂದರು .
BIGG NEWS: ಕೆರೂರಿನಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ಚಲೋ ಪ್ರತಿಭಟನೆ; ನಗರದ್ಯಂತ ಖಾಕಿ ಸರ್ಪಗಾವಲು
ನಗರದಲ್ಲಿ ಮಾತನಾಡಿದ ಅವರು,ನನಗೆ ನ್ಯಾಯಾಂಗದ ಮೇಲೆ ತುಂಬಾ ವಿಶ್ವಾಸವಿದೆ. ಆದರೆ ನಾನು ಏನು ತಪ್ಪು ಮಾಡಿಲ್ಲ. ಹೀಗಾಗಿ ನನಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬಿಡಿಎ ವಸತಿ ಯೋಜನೆ ಕಾಮಗಾರಿಗೆ ಗುತ್ತಿಗೆ ನೀಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
BIGG NEWS: ಕೆರೂರಿನಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ಚಲೋ ಪ್ರತಿಭಟನೆ; ನಗರದ್ಯಂತ ಖಾಕಿ ಸರ್ಪಗಾವಲು
ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಸಚಿವ ಸೋಮಶೇಖರ್, ಶಶಿಧರ್ ಮುರಳಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ ಹಾಗೂ ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.