ಬೆಂಗಳೂರು: ನಿರ್ದೇಶಕರೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ, ಮದುವೆಯಾಗಿ ಕಿರುಕುಳ ನೀಡುತ್ತಿರುವ ಆರೋಪದಡಿ ಕನ್ನಡದ ಖ್ಯಾತ ಕಿರುತೆರೆ ಹಿರಿಯ ನಟಿ ಶಶಿಕಲಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಜಾರಾಜ್ಯ ಚಿತ್ರದ ನಿರ್ದೇಶಕ ಹರ್ಷವರ್ಧನ್ ಅವರು ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ತೆರಳಿ ಬ್ಲಾಕ್ ಮೇಲ್ ಮಾಡಿ ಮದುವೆಯಾಗಿದ್ದು, ದೂರವಿದ್ದರೂ ಕೂಡ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬುದಾಗಿ ನಟಿ ಶಶಿಕಲಾ ವಿರುದ್ಧ ದೂರು ನೀಡಿದ್ದಾರೆ.
ನನ್ನನ್ನು ಸಿನಿಮಾಗೆ ಹಣ ಹೂಡಿಕೆ ಮಾಡೋದಾಗಿ ನಂಬಿಸಿ ಮದುವೆಯಾದರು. ಆ ಬಳಿಕ ಯಾವುದಾದರೂ ವಿಚಾರಕ್ಕೆ ಪ್ರಶ್ನೆ ಮಾಡಿದ್ರೇ ನನಗೆ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಿರ್ದೇಶಕರ ಹರ್ಷವರ್ಧನ್ ದೂರಿನ ಅನ್ವಯ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕನ್ನಡದ ಕಿರುತೆರೆ ಹಿರಿಯ ನಟಿ ಶಶಿಕಲಾ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್