ಬೆಂಗಳೂರು: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿತ್ತು. ಈ ಪ್ರಣಾಳಿಕೆ ಮುಸ್ಲೀಂ ಲೀಗ್ ಪ್ರಣಾಳಿಕೆ ಅಂತ ಛೇಡಿಸಿ ಕರ್ನಾಟಕ ಬಿಜೆಪಿ ಪಕ್ಷದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ದೂರು ನೀಡಿದ್ದರ ಹಿನ್ನಲೆಯಲ್ಲಿ ಕರ್ನಾಟಕ ಬಿಜೆಪಿ ಪಕ್ಷದ ಎಕ್ಸ್ ಖಾತೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯೋಗವು, 23.04.2024 ರಂದು ಬಿಜೆಪಿಯ ಅಧಿಕೃತ ಹ್ಯಾಂಡಲ್ನಲ್ಲಿ “ಕಾಂಗ್ರೆಸ್ ಪ್ರಣಾಳಿಕೆ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆ” ಎಂಬ ಶೀರ್ಷಿಕೆಯಡಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಟ್ವೀಟ್ ಮಾಡಲಾಗಿತ್ತು. ಇದರ ವಿರುದ್ಧ ದೂರು ಬಂದ ಹಿನ್ನಲೆಯಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಎಫ್ಎಸ್ಟಿ ತಂಡವು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ ಎಂದು ತಿಳಿಸಿದೆ.
A FIR has been lodged by the FST team of Malleswaram Assembly Constituency against a tweet posted in X by BJP's Official handle on 23.04.2024 titled "Congress Manifesto or Muslim League Manifesto" at Malleswaram Police Station.
— Chief Electoral Officer, Karnataka (@ceo_karnataka) April 24, 2024
‘ಬಿಜೆಪಿ ಶಾಸಕ ಉದಯ್ ಗರುಡಾಚಾರ್’ಗೆ ಹೈಕೋರ್ಟ್ ಬಿಗ್ ರಿಲೀಫ್: ತಪ್ಪು ಮಾಹಿತಿ ಆರೋಪದ ‘ಪ್ರಕರಣ ರದ್ದು’
‘ನಾನು ಆ ರೀತಿ ಹೇಳಿಲ್ಲ’ : ಸಂಪತ್ತಿನ ಮರುಹಂಚಿಕೆ ವಿವಾದದ ಕುರಿತು ‘ರಾಹುಲ್ ಗಾಂಧಿ’ ಸ್ಪಷ್ಟನೆ