ಬೆಂಗಳೂರು: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿತ್ತು. ಈ ಪ್ರಣಾಳಿಕೆ ಮುಸ್ಲೀಂ ಲೀಗ್ ಪ್ರಣಾಳಿಕೆ ಅಂತ ಛೇಡಿಸಿ ಕರ್ನಾಟಕ ಬಿಜೆಪಿ ಪಕ್ಷದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ದೂರು ನೀಡಿದ್ದರ ಹಿನ್ನಲೆಯಲ್ಲಿ ಕರ್ನಾಟಕ ಬಿಜೆಪಿ ಪಕ್ಷದ ಎಕ್ಸ್ ಖಾತೆ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯೋಗವು, 23.04.2024 ರಂದು ಬಿಜೆಪಿಯ ಅಧಿಕೃತ ಹ್ಯಾಂಡಲ್ನಲ್ಲಿ “ಕಾಂಗ್ರೆಸ್ ಪ್ರಣಾಳಿಕೆ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆ” ಎಂಬ ಶೀರ್ಷಿಕೆಯಡಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಟ್ವೀಟ್ ಮಾಡಲಾಗಿತ್ತು. ಇದರ ವಿರುದ್ಧ ದೂರು ಬಂದ ಹಿನ್ನಲೆಯಲ್ಲಿ  ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಎಫ್ಎಸ್ಟಿ ತಂಡವು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ ಎಂದು ತಿಳಿಸಿದೆ.

“ಅಮೆರಿಕಕ್ಕೆ ಮೋದಿಯಂತಹ ನಾಯಕನ ಅಗತ್ಯವಿದೆ” : ‘ನಮೋ’ ಶ್ಲಾಘಿಸಿದ ‘ಜೆಪಿ ಮೋರ್ಗಾನ್ CEO’

WhatsApp Updates:ಶೀಘ್ರದಲ್ಲೇ ವಾಟ್ಸಪ್ ನಲ್ಲಿ ಮೊಬೈಲ್ ಸಂಖ್ಯೆಯನ್ನು ಉಳಿಸದೆ ಕರೆ ಮಾಡುವ ಸೌಲಭ್ಯ

Share.
Exit mobile version