ಕೊಚ್ಚಿ : ಕೊಲ್ಕತ್ತಾದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಘಟನೆ ಆದ ಬಳಿಕ ದೇಶದಲ್ಲಿ ಈ ಹಿಂದೆ ಅನೇಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಪ್ರಕರಣಗಳು ಇದೀಗ ಬೆಳಕಿಗೆ ಬರುತ್ತಿವೆ. ಇದೀಗ ಮಲಯಾಳಂ ನಿರ್ಮಾಪಕ ರಂಜಿತ್ ವಿರುದ್ಧ ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದೂ, ಈ ಕುರಿತು ಕೇರಳ ಪೊಲೀಸರು ರಂಜಿತ್ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.
ಹೌದು ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ಅವರು ಈ ಕುರಿತಂತೆ ಕೊಚ್ಚಿ ನಗರ ಪೊಲೀಸ್ ಕಮಿಷನರ್‌ಗೆ ಚಲನಚಿತ್ರ ನಿರ್ಮಾಪಕರ ವಿರುದ್ಧ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ. 2009ರಲ್ಲಿ ‘ಪಾಲೇರಿ ಮಾಣಿಕ್ಯಂ’ ಸಿನಿಮಾದಲ್ಲಿ ನಟಿಸುವಂತೆ ನಟಿಯನ್ನು ಆಹ್ವಾನಿಸಿದ ನಂತರ ರಂಜಿತ್ ಅವರು ಲೈಂಗಿಕ ಉದ್ದೇಶದಿಂದ ನಟಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಪೊಲೀಸರಿಗೆ ಇಮೇಲ್ ಮೂಲಕ ಕಳುಹಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ.
ಸಂಬಂಧಿಸಿದ ವ್ಯಕ್ತಿ (ರಂಜಿತ್) ಮಲಯಾಳಂ ಚಿತ್ರರಂಗದಲ್ಲಿ ಖ್ಯಾತನಾಮರು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ. ಮುಂಬರುವ ಚಲನಚಿತ್ರ ಯೋಜನೆ ಕುರಿತು ಚರ್ಚಿಸಲು ನಾನು ಅವರ ಮನೆಗೆ ಹೋಗಿದ್ದೆ. ಅಲ್ಲಿ ಅವರ ನಡವಳಿಕೆ ನನಗೆ ಇಷ್ಟವಾಗಲಿಲ್ಲ. ನಾವು ಸ್ಕ್ರಿಪ್ಟ್ ಬಗ್ಗೆ ಚರ್ಚಿಸುತ್ತಿರುವಾಗ ಅವರು ಅನುಚಿತವಾಗಿ ವರ್ತಿಸಿದರು ಎಂದು ಶ್ರೀಲೇಖಾ ದೂರಿರುವುದಾಗಿ ಪಿಟಿಐ ವರದಿ ಮಾಡಿದೆ.
ಅವರು ಚಿತ್ರರಂಗದ ಇತರ ನಟಿಯರೊಂದಿಗೆ ಅದೇ ರೀತಿ ನಡೆಸಿಕೊಂಡಿದ್ದಾರೆಯೇ ಎಂದು ನನಗೆ ಗೊತ್ತಿಲ್ಲ. ಅಂತಹ ಪರಿಸ್ಥಿತಿ ಎದುರಾದರೆ ಅದನ್ನು ಬಹಿರಂಗಪಡಿಸುವುಗು ಅವರಿಗೆ ಬಿಟ್ಟದ್ದು. ಬಹುಶಃ ನಿರ್ದೇಶಕ ರ ಶಕ್ತಿ ಮತ್ತು ಪ್ರಭಾವವು ಇತರರು ಮಾತನಾಡದಿರುವಂತೆ ತಡೆಯುತ್ತಿದೆ ಎಂದಿದ್ದಾರೆ.ಕೊಚ್ಚಿ ಪೊಲೀಸ್ ಕಮಿಷನರ್ ಎಸ್ ಶ್ಯಾಮಸುಂದರ್ ಪ್ರಕಾರ, ಐಪಿಸಿ ಸೆಕ್ಷನ್ 354 ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲದಿಂದ ಆಕೆಯ ಘನತೆಗೆ ಹಾನಿಗೊಳಿಸುವ ಉದ್ದೇಶದಿಂದ ಪ್ರಕರಣವನ್ನು ದಾಖಲಿಸಲಾಗಿದೆ.