ಹಾಸನ: ಜೆಡಿಎಸ್ ಕಾರ್ಯಕರ್ತರೊಬ್ಬರು ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸ್ವಾಭಾವಿಕ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಹೊಳೇನರಸೀಪುರ ಪೊಲೀಸ್ ಠಾಣೆಗೆ ತೆರಳಿ, ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಾಜಿ ಸಚಿವ ಹೆಚ್.ಡಿ ರೇವಣ್ಣ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೇಸ್ ಬೆನ್ನಲ್ಲೇ, ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಕುಟುಂಬಕ್ಕೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ವಿಧಾನ ಪರಿಷತ್ ಸದಸ್ಯ ಡಾ.ಸೂರತ್ ರೇವಣ್ಣ ವಿರುದ್ಧ ಜೆಡಿಎಸ್ ಕಾರ್ಯಕರ್ತನೊಬ್ಬ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ.
ಈ ಕುರಿತಂತೆ ಸಂತ್ರಸ್ತರೊಬ್ಬರು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಿಜಿ ಮತ್ತು ಐಜಿಪಿ ಹಾಗೂ ಹಾಸನ ಎಸ್ಪಿಗೆ ದೂರು ನೀಡಿದ್ದಾರೆ. ಅದರಲ್ಲಿ ಜೂನ್.16ರಂದು ಸೂರಜ್ ರೇವಣ್ಣ ಅವರು ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು, ಬಲವಂತವಾಗಿ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬುದಾಗಿ ಹೇಳಿದ್ದರು.
ಇಂದು ಹೊಳೆನರಸೀಪುರ ಪೊಲೀಸ್ ಠಾಣೆಗೆ ತೆರಳಿ ಸೂರಜ್ ರೇವಣ್ಣ ವಿರುದ್ಧ ಜೆಡಿಎಸ್ ಕಾರ್ಯಕರ್ತರೊಬ್ಬರು ದೂರು ಸಲ್ಲಿಸಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ.
Good News: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಉಚಿತವಾಗಿ ‘KSRTC ಬಸ್’ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ