ನವದೆಹಲಿ: ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀಡಿದ ಹೇಳಿಕೆಗಳ ಮೂಲಕ ಸಿಖ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ಮುಖಂಡ ಅಶೋಕ್ ಕುಮಾರ್ ಅವರು ಸಿಗ್ರಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
“ಸಿಖ್ಖರ ಭಾವನೆಗಳನ್ನು ನೋಯಿಸುವ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ದೇಶದ ಸಮಗ್ರತೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಮಾರ್ ಆರೋಪಿಸಿದರು. ಮೀಸಲಾತಿ ಬಗ್ಗೆ ಹೇಳಿಕೆ ನೀಡಿದ ಆರೋಪವೂ ಅವರ ಮೇಲಿದೆ ಎಂದು ಸಿಗ್ರಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಮನೋಜ್ ಕುಮಾರ್ ಮಿಶ್ರಾ ಹೇಳಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152 (ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಶೋಕ್ ಕುಮಾರ್ ಅವರು ವಾರಣಾಸಿ ಮಹಾನಗರ ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ ಎಂದು ವಾರಣಾಸಿ ನಗರ ಬಿಜೆಪಿ ಅಧ್ಯಕ್ಷ ವಿದ್ಯಾ ಸಾಗರ್ ಹೇಳಿದ್ದಾರೆ








