ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರು ಅಮೃತಹಳ್ಳಿ ಠಾಣೆಯಲ್ಲಿ ಉದ್ಯಮಿಗೆ ಜೀವ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೂ ಸಂಕಷ್ಟ ಎದುರಾಗಿದೆ.
ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ತಾತ ಅವರು ದೂರು ನೀಡಿದ್ದಾರೆ. ಈ ದೂರು ಆಧರಿಸಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಸ್ಸಿ ರಮೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದೂರಿನಲ್ಲಿ ಏನಿದೆ.?
ಆಗಸ್ಟ್.24, 2024ರಂದು ರಾತ್ರಿ ನನ್ನ ಮನೆಗೆ ರಮೇಶ್ ಗೌಡ ಆಗಮಿಸಿದ್ರು. ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಚರ್ಚಿಸಿದ್ರು. ಊಟ ಕೂಡ ಮಾಡಿದ್ರು. ಈ ವೇಳೆ ಹೆಚ್.ಡಿ ಕುಮಾರಸ್ವಾಮಿಗೆ ಕರೆ ಮಾಡಿ, ತಾನು ವಿಜಯ್ ತಾತ ಮನೆಯಲ್ಲಿ ಇರುವ ಬಗ್ಗೆ ತಿಳಿಸಿ ನನಗೆ ಪೋನ್ ಕೊಟ್ಟರು. ಅವರು ಕುಶಲೋಪರಿ ವಿಚಾರಿಸಿ, ಆ ಬಳಿಕ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ ಬಗ್ಗೆ ಮಾತನಾಡಿದರು. ಇದಕ್ಕಾಗಿ ನಮಗೆ ಖರ್ಗಿ 50 ಕೋಟಿ ಬೇಕಾಗುತ್ತದೆ ಎಂದರು. ಆಗ ಸರ್ ನನ್ನ ಬಳಿ ಅಷ್ಟೊಂದು ಹಣವಿಲ್ಲ ಎಂದೆ. ಅದಕ್ಕೆ ಕೋಪಗೊಂಡ ಕುಮಾರಸ್ವಾಮಿ 50 ಕೋಟಿ ರೆಡಿ ಮಾಡು, ಇಲ್ಲದೇ ಹೋದ್ರೆ ನಾನೇನ್ ಮಾಡುತ್ತೇನೋ ಗೊತ್ತಿಲ್ಲ ಎಂಬುದಾಗಿ ಬೆದರಿಕೆ ಹಾಕಿದ್ದಾಗೆ ದೂರಿನಲ್ಲಿ ತಿಳಿಸಿದ್ದಾರೆ.
ಹಣ ನೀಡುವಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಎಂಎಲ್ಸಿ ರಮೇಶ್ ಗೌಡ ಅವರು ಜೀವ ಬೆದರಿಕೆಯನ್ನು ಹಾಕಿದ್ದಾರೆ. 50 ಕೋಟಿ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರಲ್ಲಿ ತಮಗೆ ರಿಯಲ್ ಎಸ್ಟೇಟ್ ಉದ್ಯಮ ನಡೆಸೋದಕ್ಕೆ, ಬದುಕೋದಕ್ಕೆ ಕಷ್ಟವಾಗಿದೆ. ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ 50 ಕೋಟಿ ರೆಡಿ ಮಾಡಿಕೊಳ್ಳಿ. ಜೊತೆಗೆ ದೇವಸ್ಥಾನ, ಶಾಲೆ ಕಟ್ಟಿಸುತ್ತಿದ್ದು, ಅದಕ್ಕೆ ಐದು ಕೋಟಿ ನೀಡುವಂತೆಯೂ ಒತ್ತಾಯಿಸಿದ್ದಾರೆ. ಅಲ್ಲದೇ ಹಣವನ್ನು ನೀಡದೇ ಇದ್ದರೇ ನಿಮಗೆ ತೊಂದರೆ ಆಗಲಿದೆ ಎಂಬುದಾಗಿ ಧಮ್ಕಿ ಹಾಕಿದ್ದಾರೆ. ಈ ಬಗ್ಗೆ ರಮೇಶ್ ಗೌಡ ನನಗೆ ವಾಟ್ಸ್ ಆಪ್ ಸಂದೇಶ ಕೂಡ ಕಳುಹಿಸಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ತಾತ ದೂರಿನ ಹಿನ್ನಲೆಯಲ್ಲಿ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
BIG UPDATE : ನನಗೆ ‘ED’ಯಿಂದ ಯಾವುದೇ ನೋಟಿಸ್ ಬಂದಿಲ್ಲ : ಸಚಿವ ಭೈರತಿ ಸುರೇಶ್ ಸ್ಪಷ್ಟನೆ