ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ಅವರ ವಿರುದ್ಧ ಉದ್ಯಮಿಯೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಗೆ ತೇರಳಿದ್ದಂತ ಉದ್ಯಮಿ ವಿಜಯ್ ತಾತ ಎಂಬುವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ವಿರುದ್ಧ ಜೀವ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ದೂರು ನೀಡಿದ್ದರು.
ಈ ದೂರಿನ ಹಿನ್ನಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.