ಶಿವಮೊಗ್ಗ: ಪ್ರಚೋದನಕಾರಿ ಭಾಷಣೆ ಮಾಡಿದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ವಿರುದ್ಧ ಸಾಗರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಿನ್ನೆ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿಯ ಮುಂದೆ ಚಾಮರಾಜಪೇಟೆಯಲ್ಲಿ ನಡೆದಿದ್ದಂತ ಹುಸುವಿನ ಕೆಚ್ಚಲು ಕೊಯ್ದಂತ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಹಾಗೂ ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ತಾಲ್ಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಉಪವಿಭಾಗಾಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಸಾಗರ ತಾಲ್ಲೂಕು ಬಿಜೆಪಿ ಘಟಕದಿಂದ ಮನವಿ ಮಾಡಲಾಗಿತ್ತು.
ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಂತ ಶಿವಮೊಗ್ಗ ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಅವರು, ಒಂದು ಸಮುದಾಯವನ್ನು ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು.
ಈ ಹಿನ್ನಲೆಯಲ್ಲಿ ಇಂದು ಮುಸ್ಲೀಂ ಮುಖಂಡ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಅಜೀಂ ಎಂಬುವರು ಸಾಗರ ನಗರ ಠಾಣೆಗೆ ತೆರಳಿ, ಅರುಣ್ ಕುಗ್ವೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ಸಾಗರ ನಗರ ಠಾಣೆಯಲ್ಲಿ ಬಿಎನ್ ಎಸ್ ಕಾಯ್ದೆಯ 192 ರಡಿ ಎಫ್ಐಆರ್ ದಾಖಲಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಶಿಕ್ಷಣ, ಸಂಘಟನೆಯಿಂದ ಸಮುದಾಯದ ಏಳ್ಗೆ ಸಾಧ್ಯ: ಸಚಿವ ಶಿವರಾಜ್ ತಂಗಡಗಿ ಅಭಿಮತ
BREAKING: ‘KUWJ ವಾರ್ಷಿಕ ಪ್ರಶಸ್ತಿ’ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ
‘ಸ್ವರ್ಣ ಪ್ರಾಶನ’ ಮಕ್ಕಳ ಸದೃಢ ಆರೋಗ್ಯಕ್ಕೆ ಸಹಕಾರಿಯೇ? ಇಲ್ಲಿದೆ ಸಂಪೂರ್ಣ ಮಾಹಿತಿ | Swarna Bindu Prashana