ಶಿವಮೊಗ್ಗ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ನಿಂದಿಸಿದಂತ ಶಾಸಕ ಸಂಗಮೇಶ್ ಪುತ್ರನ ವಿರುದ್ಧ ಭದ್ರಾವತಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಪುತ್ರ ಬಸವೇಶ್ ಅವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಜ್ಯೋತಿ ಎಂಬುವರಿಗೆ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಸಂಬಂಧ ಮಹಿಳಾ ಅಧಿಕಾರಿ ಜ್ಯೋತಿ ಭದ್ರಾವತಿಯ ಹಳೇ ನಗರ ಠಾಣೆಗೆ ತೆರಳಿ ದೂರು ನೀಡಿದ್ದರು.
ಇದೀಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಜ್ಯೋತಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ಇನ್ನೂ ಇದೇ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಅಜಯ್ ಎಂಬುವರನ್ನು ಬಂಧಿಸಿದ್ದಾರೆ. ಅಲ್ಲದೇ ಚನ್ನಗಿರಿ ರಸ್ತೆ ಬಳಿಯ ರವಿ ಹಾಗೂ ವರುಣ್ ಎಂಬುವರನ್ನು ಭದ್ರಾವತಿ ಡಿವೈಎಸ್ಪಿ ನಾಗರಾಜ್ ನೇತೃತ್ವದಲ್ಲಿ ಅರೆಸ್ಟ್ ಮಾಡಲಾಗಿದೆ.
SHOCKING : `Whats App’ ನಲ್ಲಿ ಮದುವೆಯಾದ ಪಿಯು ವಿದ್ಯಾರ್ಥಿಗಳು : `ಚಾಟಿಂಗ್’ ಫೋಟೋ ವೈರಲ್.!