ಬಾಗಲಕೋಟೆ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಚಿವ ಶಿವಾನಂದ್ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ದಾಖಲಾಗಿದೆ.
ಹೌದು ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಏಪ್ರಿಲ್ 29ರಂದು ನವನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದೀಗ ಕಾರ್ಮಿಕ ನಿರೀಕ್ಷಕ ರಮೇಶ್ ಭೀಮಪ್ಪ ಸಿಂದಗಿ ಅವರ ದೂರಿನ ಅನ್ವಯ ಇದೀಗ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.