ಮೈಸೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದೂರು ದಾಖಲಾಗಿದೆ. ಈ ಪ್ರಕರಣದಲ್ಲಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದರೇ, ವಾರ್ಡನ್ ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ.
ಇನ್ನೂ ಬಸವಾದಿತ್ಯ ಮೂರನೇ ಆರೋಪಿಯಾಗಿದ್ದಾರೆ. ಇದಲ್ಲದೇ ಮಠದ ಭಕ್ತರೆನ್ನಲಾದಂತ ಮೈಸೂರಿನ ಪರಮಶಿವಯ್ಯ ಹಾಗೂ ವಕೀಲ ಗಂಗಾಧರಯ್ಯ ನಾಲ್ಕು, ಐದನೇ ಆರೋಪಿಗಳಾಗಿದ್ದಾರೆ.
ಅಂದಹಾಗೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ ಚಂದ್ರಕುಮಾರ್ ನೀಡಿದಂತ ದೂರಿನ ಮೇರೆಗೆ, ಮೈಸೂರಿನ ನಜರಾಬಾದ್ ಠಾಣೆಯಲ್ಲಿ ನಾಡಿನ ಪ್ರತಿಷ್ಠಿತ ಮಠವಾದಂತ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಬ್ಬರು ವಿದ್ಯಾರ್ಥಿನಿಯರ ಹೇಳಿಕೆ ಆಧರಿಸಿ ಎಫ್ ಐ ಆರ್ ದಾಖಲಾಗಿದೆ.
ಇಬ್ಬರು ವಿದ್ಯಾರ್ಥಿನಿಯರಲ್ಲಿ ಒಬ್ಬರಿಗೆ ಮೂರೂವರೆ ವರ್ಷಗಳಿಂದ, ಮತ್ತೊಬ್ಬ ವಿದ್ಯಾರ್ಥಿನಿಗೆ ಒಂದೂವರೆ ವರ್ಷದಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯ ಮಾಡುತ್ತಿರೋದಾಗಿ ದೂರಿನಲ್ಲಿ ಉಲ್ಲೇಘಿಸಲಾಗಿದೆ. ಇದಕ್ಕೆ ಸಹಕರಿಸಿದಂತ ಉಳಿದ ಆರೋಪಿಗಳ ಬಗ್ಗೆಯೂ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತ ಸಮಾಲೋಚನೆ ಸಮಯದಲ್ಲಿ ವಿದ್ಯಾರ್ಥಿನಿಯರು ಹೇಳಿಕೆ ಆದರಿಸಿ ದೂರು ಸಲ್ಲಿಸಲಾಗಿತ್ತು.