ಚಿಕ್ಕಬಳ್ಳಾಪುರ: ಜಿಲ್ಲೆಯ ಲೋಕಸಭಾ ಸಂಸದ ಡಾ.ಕೆ ಸುಧಾಕರ್ ವಿರುದ್ಧ ಕಾರು ಚಾಲಕ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ. ಡಾ.ಕೆ.ಸುಧಾಕರ್ ಅವರನ್ನು ಎಫ್ಐಆರ್ ನಲ್ಲಿ ಎ1 ಆರೋಪಿಯಾಗಿ ಉಲ್ಲೇಖಿಸಲಾಗಿದೆ.
ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಚಾಲಕನೋಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಘಟನೆ ನಡೆದಿತ್ತು.
ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗು ಯುವಕರಿಬ್ಬರ ಹೆಸರು ಬರೆದಿಟ್ಟು ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾದ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಅವರ ಬೆಂಬಲಿಗರಾದ, ನಾಗೇಶ್ ಮಂಜುನಾಥ್ ಹೆಸರು ಬರೆದಿಟ್ಟು ಜಿಲ್ಲಾ ಪಂಚಾಯತಿ ಗುತ್ತಿಗೆ ಚಾಲಕ ಎನ್. ಬಾಬು ನೇಣಿಗೆ ಶರಣಾಗಿದ್ದಾರೆ.
ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೀಗ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ ಎ1 ಆರೋಪಿಯಾಗಿ ಎಫ್ಐಆರ್ ದಾಖಲಿಸಿದ್ದಾರೆ.
‘ಜೋಗ್ ಫಾಲ್ಸ್’ನ ಅಪಾಯದ ಪ್ರದೇಶದಲ್ಲಿ ವೀಡಿಯೋ ಮಾಡಿದ್ದ ಯೂಟ್ಯೂಬರ್ ವಿರುದ್ಧ ‘FIR’ ದಾಖಲು
BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು