ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ವೀಡಿಯೋ ಪೋಸ್ಟ್ ಮಾಡಿದ ಕಾರಣ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಈ ಕುರಿತಂತೆ ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥರಾದಂತ ರಮೇಶ್ ಬಾಬು ಅವರು ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾದಂತ ವೀಡಿಯೋವನ್ನು ಕರ್ನಾಟಕ ಬಿಜೆಪಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ವೀಡಿಯೋದಲ್ಲಿ ಬಿಜೆಪಿ ಸಿದ್ಧರಾಮಯ್ಯ ಅವರು ವಿವಿಧ ಅನುದಾನವನ್ನು ಮುಸ್ಲೀಂ ಸಮುದಾಯದವರಿಗೆ ಹಂಚುತ್ತಿದ್ದಾರೆ ಎಂಬುದಾಗಿ ಬಿಂಬಿಸಲಾಗಿದೆ. ಇದು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದಂತೆ ಆಗಿದೆ ಎಂದಿದ್ದರು.

ಈ ದೂರಿನ ಹಿನ್ನಲೆಯಲ್ಲಿ ಎ.1 ಆರೋಪಿಯಾಗಿ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಎ.2 ಆರೋಪಿಯಾಗಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಎ.3 ಆರೋಪಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದೆ.

‘ವುಹಾನ್’ ಲ್ಯಾಬ್ನಿಂದ ಕೋವಿಡ್ ಸೋರಿಕೆಯಾಗುವ ಸಾಧ್ಯತೆ ಹೆಚ್ಚು: ಯುಕೆಗೆ ಅಮೆರಿಕ ಎಚ್ಚರಿಕೆ

‘ವುಹಾನ್’ ಲ್ಯಾಬ್ನಿಂದ ಕೋವಿಡ್ ಸೋರಿಕೆಯಾಗುವ ಸಾಧ್ಯತೆ ಹೆಚ್ಚು: ಯುಕೆಗೆ ಅಮೆರಿಕ ಎಚ್ಚರಿಕೆ

Share.
Exit mobile version