ಚಂಡೀಗಢ : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇರೆಗೆ ಜಾಟ್ ಚಲನಚಿತ್ರದ ನಾಯಕ ಸನ್ನಿ ಡಿಯೋಲ್ ಸೇರಿದಂತೆ ಒಟ್ಟು 7 ಜನರ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ. ಹೌದು ಬಾಲಿವುಡ್ ನಟ ಸನ್ನಿ ಡಿಯೋಲ್ ನಟನೆಯ ‘ಜಾಟ್’ ಸಿನಿಮಾಗೆ ಕಾನೂನು ಸಂಕಷ್ಟ ಎದುರಾಗಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ‘ಜಾಟ್’ ಚಿತ್ರತಂಡದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಭಾರತೀಯ ನ್ಯಾಯ ಸಂಹಿತಾ 299ರ ಸೆಕ್ಷನ್ ಅಡಿಯಲ್ಲಿ ನಟ ಸನ್ನಿ ಡಿಯೋಲ್, ರಣದೀಪ್ ಹೂಡಾ (Randeep Hooda), ವಿನೀತ್ ಕುಮಾರ್ ಸಿಂಗ್, ಡೈರೆಕ್ಟರ್ ಗೋಪಿಚಂದ್ ಮಲಿನೇನಿ, ನಿರ್ಮಾಪಕರಾದ ಟಿ.ಜಿ ವಿಶ್ವ ಪ್ರಸಾದ್, ನವೀನ್ ಯೆರ್ನೇನಿ, ವೈ ರವಿಶಂಕರ್ ವಿರುದ್ಧ ಜಲಂಧರ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಲಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 299 (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಜಲಂಧರ್ ಪೊಲೀಸರು ಬುಧವಾರ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ. ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಅದರ ನಿರ್ಮಾಪಕರ ವಿರುದ್ಧವೂ ಇದನ್ನು ದಾಖಲಿಸಲಾಗಿದೆ.ಚಿತ್ರದ ದೃಶ್ಯದಲ್ಲಿ, ಶ್ರೀ ಹೂಡಾ ಅವರ ಪಾತ್ರವು ಪವಿತ್ರ ಪೀಠದ ಮೇಲೆ, ಜನರು ಪ್ರಾರ್ಥನೆ ಮಾಡುತ್ತಿರುವಾಗ ಚರ್ಚ್‌ನೊಳಗೆ ಶಿಲುಬೆಯ ಕೆಳಗೆ ನಿಂತಿರುವುದನ್ನು ತೋರಿಸುತ್ತದೆ ಎಂದು ವರದಿಯಾಗಿದೆ. ಇದು ಬೆದರಿಕೆ ಮತ್ತು ಅಶಿಸ್ತಿನ ವರ್ತನೆಯ ದೃಶ್ಯಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ.