ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ ದಾಖಲಾಗಿದೆ.
ಬಾಲ್ಯ ವಿವಾಹ ಕುರಿತು ಮಾಹಿತಿ ತಿಳಿದು ಬಂದ ಕೂಡಲೇ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಂ.ಲಿಂಗರಾಜು ವಿರುದ್ದ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಅ.4 ರಂದು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.
ಅ.15 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆ
ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಆಚರಿಸುವ ಸಂಬಂಧ ಅ.15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು ಸಭೆಯ ಅಧ್ಯಕ್ಷತೆ ವಹಿಸುವರು. ಸಮಾಜದ ಮುಖಂಡರು, ಸಾರ್ವಜನಿಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗೆ ಹಾಜರಾಗಿ ಸಲಹೆ ಸೂಚನೆ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.
ಸ್ವ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಹೊಲಿಗೆ, ವೀಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ