ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುತ್ತಾರೆ. ಈ ಸಂಬಂಧ ಕೆಲ ದೂರುಗಳು ಬಂದ ಹಿನ್ನೆಲೆಯಲ್ಲಿ 11ನೇ ಅಕ್ಟೋಬರ್ 2024 ರಂದು ಸಿಇಎನ್ ಪೊಲೀಸ್ ಠಾಣೆ(ಕೇಂದ್ರ ವಿಭಾಗ)ಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ.
ಸಾಮಾಜಿಕ ಜಾಲತಾಣಗಳ ವಂಚಕರು ಪಾಲಿಕೆಯ ಮುಖ್ಯ ಆಯುಕ್ತರ ಭಾವಚಿತ್ರ, ಹೆಸರು, ಹುದ್ದೆ ಮತ್ತು ಸಂಸ್ಥೆಯ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಫೇಸ್ ಬುಕಕ ಖಾತೆ(https://www.facebook.com/share/72znq6cB8NENELpo/) ಯನ್ನು ತೆರೆಯಲಾಗಿದೆ.
ಮುಂದುವರಿದು, ನಕಲಿ ಫೇಸ್ ಬುಕ್ ಖಾತೆ ಮೂಲಕ ಪಾಲಿಕೆಯ ಅಧಿಕಾರಿ ಹಾಗೂ ನೌಕರರಿಗೆ ಮತ್ತು ಸಾರ್ವಜನಿಕರಿಗೆ ವಂಚಿಸುವ ಸಾಧ್ಯತೆ ಇರುವುದರಿಂದ ಸದರಿ ಫೇಸ್ ಬುಕ್ ಖಾತೆಯನ್ನು ಡಿಲೀಟ್ ಮಾಡಿಸಿ, ಫೇಸ್ ಬುಕ್ ಖಾತೆಯನ್ನು ತೆರೆದಿರುವ ಅಪರಿಚಿತ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ದೂರು ದಾಖಲಿಸಲಾಗಿರುತ್ತದೆ.
ಲಾವೋಸ್’ನಲ್ಲಿ ಕೆನಡಾದ ಪ್ರಧಾನಿ ‘ಜಸ್ಟಿನ್ ಟ್ರುಡೋ’ ಭೇಟಿಯಾದ ‘ಪ್ರಧಾನಿ ಮೋದಿ’