ಬೆಂಗಳೂರು : ಬೆಂಗಳೂರಿನ ನೆಲಮಂಗಲದಲ್ಲಿ ಫ್ಲೈ ವುಡ್ ಗೋದಾಮಿಗೆ ಬೆಂಕಿ ಬಿದ್ದಿದ್ದು, ಇಡೀ ಫ್ಲೈ ವುಡ್ ಗೋದಾಮು ಬೆಂಕಿಯ ಕೆನ್ನಾಲಿಗೆಯಿಂದ ಹೊತ್ತಿ ಉರಿದು ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿದೆ.
ಕಿಡಿಗೇಡಿಗಳು ಫ್ಲೈ ವುಡ್ ಗೋದಾಮಿಗೆ ಬೆಂಕಿ ಹಚ್ಚಿದ್ದಾರೆ. ಎನ್ನುವ ಶಂಕೆ ವ್ಯಕ್ತವಾಗುತ್ತಿದ್ದು ನೆಲಮಂಗಲದ ಶಾಂತಿನಗರದಲ್ಲಿ ಇರುವ ಈ ಗೋದಾಮು, ಬೆಂಕಿಯಿಂದ ಇಡೀ ಏರಿಯಾದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು ಭಾರಿ ಪ್ರಮಾಣದಲ್ಲಿ ಬೆಂಕಿ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.








