ಬೆಂಗಳೂರು:ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು ಎರಡು ಅಂತಸ್ತಿನ ಕಟ್ಟಡ ಬೆಂಕಿಗಾವುತಿ ಆಗಿದ್ದು 30 ಲಕ್ಷಕ್ಕೂ ಹೆಚ್ಚು ವಸ್ತುಗಳು ಸುಟ್ಟು ಹೋಗಿವೆ.
ಬೆಂಗಳೂರಿನ ಉಪ್ಪಾರಪೇಟೆ ಠಾಣಾ ವ್ಯಾಪ್ತಿಯ ಬಳೆಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯಿಂದ ಎರಡು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ.
ಕೃಷ್ಣಮೂರ್ತಿ ಎಂಬುವರಿಗೆ ಸೇರಿದ ಕಟ್ಟಡ ಇದಾಗಿದೆ, ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಉಪ್ಪಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಕಟ್ಟಡದಲ್ಲಿ ಪೇಂಟಿಂಗ್, ಬ್ಯಾಗ್ ಅಂಗಡಿ ಇದ್ದು ಬೆಂಕಿಗೆ ಆಹುತಿ ಆಗಿವೆ.