ಬೆಂಗಳೂರು: ನಗರದ ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವಂತ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾಗಿದೆ. ಇದರಿಂದಾಗಿ 30ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬೈಕ್ ಗಳು ಬೆಂಕಿಗೆ ಆಹುತಿಯಾಗಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಹೃದಯ ಭಾಗದ ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವಂತ ಒಕಿನೋವಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಭೀಕರ ಅಗ್ನಿ ಅವಘಡ ಉಂಟಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿಗಳು ಹೊರ ಓಡಿ ಬಂದಿದ್ದಾರೆ. ಹೀಗಾಗಿ ಒಳಗೆ ಯಾರೂ ಇಲ್ಲ ಎಂಬುದಾಗಿ ಹೇಳಲಾಗುತ್ತಿದೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜಾಜಿನಗರ ಠಾಣೆಯ ಪೊಲೀಸರು ಆಗಮಿಸಿದ್ದಾರೆ. ಇದೀಗ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ. ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲ.