ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಗಲಾಟೆ ಮಾಸೋ ಮುನ್ನವೇ ಮತ್ತೊಂದು ದೃಶ್ ಕೃತ್ಯ ಎಸಗಲಾಗಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ಬೆಂಕಿ ಇಡಲಾಗಿದೆ.
ಬಳ್ಳಾರಿಯ ಬ್ಯಾನರ್ ಗಲಾಟೆ ಮಾಸೋ ಮುನ್ನವೇ ಮತ್ತೊಂದು ಕೃತ್ಯವನ್ನು ಎಸಗಲಾಗಿದೆ. ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ. ಪೆಟ್ರೋಲ್ ಸುರಿದು ಮಾಡೆಲ್ ಹೌಸ್ ಗೆ ಬೆಂಕಿ ಇರಿಸಿರೋದಾಗಿ ಹೇಳಲಾಗುತ್ತಿದೆ.
ಕೈ ಶಾಸಕ ಭರತ್ ರೆಡ್ಡಿ ಬೆಂಬಲಿಗರೇ ಇನ್ನು ಮಾಡಿರುವುದು ಎಂಬುದಾಗಿ ಬಳ್ಳಾರಿಯಲ್ಲಿ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ಶಾಸಕ ಭರತ್ ರೆಡ್ಡಿ ವಿರುದ್ಧ ಸೋಮಶೇಖರ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
ಬೆಂಕಿ ಹಚ್ಚಿದಂತ ಘಟನಾ ಸ್ಥಳಕ್ಕೆ ಪೊಲೀಸರು ಕೂಡಲೇ ಬಂದಿದ್ದಾರೆ. ಇದನ್ನು ನಾವು ಬಿಡಲ್ಲ. ಪೊಲೀಸ್ ಠಾಣೆಗೆ ದೂರು ನೀಡುತ್ತೇವೆ ಎಂದಿದ್ದಾರೆ.
ಬ್ಯಾನರ್ ಗಲಾಟೆಯಾಗಿ ಇನ್ನೂ 15 ದಿನಗಳು ಸಹ ಆಗಿಲ್ಲ. ಆಗಲೇ ಇಂತಹ ಘಟನೆ ನಡೆದಿದೆ. ಈ ಘಟನೆಯ ಕುರಿತಂತೆ ಬಳ್ಳಾರಿ ಎಸ್ ಪಿ ಜೊತೆಗೆ ಮಾತನಾಡಿದ್ದೇನೆ ಎಂಬುದಾಗಿ ಜನಾರ್ದನರೆಡ್ಡಿ ತಿಳಿಸಿದ್ದಾರೆ.
ಮತ್ತೊಂದೆಡೆ ಕಾಂಗ್ರಸ್ ಪಕ್ಷದ ಮುಖಂಡರ ವಿರುದ್ಧ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಕಿಡಿಕಿಡಿಯಾಗಿದ್ದಾರೆ. ಬ್ಯಾನರ್ ಗಲಾಟೆ ವೇಳೆ ಬೆಂಕಿ ಹಚ್ಚುತ್ತೇನೆಂದು ಹೇಳಿದ್ರು. ಅಂದಿನ ಘಟನೆಗೆ ಸಾಕ್ಷಿ ಎನ್ನುವಂತೆ ಈಗ ಮಾಡೆಲ್ ಹೌಸ್ ಗೆ ಬೆಂಕಿ ಹಚ್ಚಿದ್ದಾರೆ. ನಮಗೆ ಸೇರಿದ ಮಾಡೆಲ್ ಹೌಸ್ ಗೆ ಬೆಂಕಿ ಹಚ್ಚಿದ್ದಾರೆ. ನೂರು ಎಕರೆ ಪ್ರದೇಶದಲ್ಲಿ ಲೇಔಟ್ ಮಾಡಲಾಗಿತ್ತು. ಖರೀದಿದಾರರಿಗೆ ತೋರಿಸಲು ಮಾಡೆಲ್ ಹೌಸ್ ನಿರ್ಮಿಸಿದ್ದೆವು. ಸಂಜೆ ಆರೂವರೆ ಸುಮಾರಿಗೆ ಬೆಂಕಿಯನ್ನು ಹಚ್ಚಲಾಗಿದೆ. ಬೆಂಕಿ ಹಚ್ಚಿದವರನ್ನ ಹಿಡಿಯಲು ಕೆಲವರು ಯತ್ನಿಸಿದ್ದಾರೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ.








