ಬೆಂಗಳೂರು: ನಗರದ ಮತ್ತಿಕೆರೆ ರಸ್ತೆಯಲ್ಲಿರುವಂತ ಎಂ ಎಸ್ ರಾಮಯ್ಯ ಆಸ್ಪತ್ರೆಯ 3ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆಯಲ್ಲಿ ಐಸಿಯುನಲ್ಲಿದ್ದಂತ ನರ್ಸ್ ಗಳ ಸಮಯ ಪ್ರಜ್ಞೆಯಿಂದ ಪ್ರಾಣಹಾನಿಯ ದುರಂತ ತಪ್ಪಿದಂತೆ ಆಗಿದೆ.
ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಅವಘಡ ಉಂಟಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಂ ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿನ ಐಸಿಯುನಲ್ಲಿ ಇದ್ದಂತ ರೋಗಿಗಳನ್ನು ಕೂಡಲೇ ನರ್ಸ್ ಗಳು ಸಮಯ ಪ್ರಜ್ಞೆಯ ಮೂಲಕ ಬೇರೆಡೆ ಶಿಫ್ಟ್ ಮಾಡಿದ್ದಾರೆ. ಹೀಗಾಗಿ ಐಸಿಯುನಲ್ಲಿದ್ದಂತ 7 ರೋಗಿಗಳು ಪ್ರಾಣಾಪಾಯದಿಂದ ಪಾರಾದಂತೆ ಆಗಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವಂತ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
‘ಖಲಿಸ್ತಾನಿ ಭಯೋತ್ಪಾದಕ’ ಪನ್ನುನಿ ಹತ್ಯೆ ಯತ್ನ: ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ ಅಮೆರಿಕ ಕೋರ್ಟ್
ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ CISCO | Lay offs