ಬೆಂಗಳೂರು : ಬೆಂಗಳೂರಿನ ಕಾಡುಗುಡಿ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವೈಟ್ ಫೀಲ್ಡ್ ನ ಮುಖ್ಯ ರಸ್ತೆಯ ಐಟಿಪಿಎಲ್ ಮುಂಭಾಗದಲ್ಲಿ ಈ ಘಟನೆ ಸಂಭವಿಸಿದ್ದು ಅರಣ್ಯದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಕಾಣಿಸಿಕೊಂಡಿದೆಎನ್ನಲಾಗುತ್ತಿದೆ.
ಈ ಅರಣ್ಯ ಪ್ರದೇಶವು ಸುಮಾರು ಸುಮಾರು 700 ಎಕರೆ ವ್ಯಾಪ್ತಿಯಲ್ಲಿ ಈ ಅರಣ್ಯ ಪ್ರದೇಶವಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ. ವೈಟ್ ಫೀಲ್ಡ್ ಮುಖ್ಯ ರಸ್ತೆಯ ಐಟಿಪಿಎಲ್ ಮುಂಭಾಗದಲ್ಲಿ ಘಟನೆ ನಡೆದಿದೆ.
ಅರಣ್ಯದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.ಆದರೆ ಈ ಬೆಂಕಿ ಅವಘಡಕ್ಕೆ ಕಾರಣ ಏನೆಂಬುದು ಇದುವರೆಗೂ ತಿಳಿದುಬಂದಿಲ್ಲ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.