ಉತ್ತರಕನ್ನಡ : ಗುಜರಿ ಸಾಮಾನುಗಳಿದಂತಹ ಗೋಡೌನ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದ ಪರಿಣಾಮ ಪಕ್ಕದ್ದಲ್ಲಿದ್ದ ಲಾರಿ ಸಮೇತ ಅಪಾರ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಗುಣವಂತೆ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿಯೇ ರಾಶಿ ಹಾಕಿದ್ದ ಗುಜರಿ ಸಾಮಾನು ಅಂಗಡಿಗೆ ಬೆಂಕಿ ಬಿದ್ದಿದೆ. ಮಧ್ಯಾಹ್ನದ ಸುಡು ಬಿಸಿಲಿನ ವೇಳೆ ಘಟನೆ ನಡೆಯಿತು. ನೋಡನೋಡುತ್ತಿದ್ದಂತೆ ಜ್ವಾಲೆ ಸಂಪೂರ್ಣ ಅಂಗಡಿಯನ್ನೇ ಆವರಿಸಿಕೊಂಡಿತು.
ದಟ್ಟ ಹೊಗೆಯಿಂದ ಸಂಪೂರ್ಣ ಪ್ರದೇಶ ಕಾಣದಂತಾಗಿ ಅಂಗಡಿ ಪಕ್ಕದಲ್ಲೇ ಇದ್ದ ಲಾರಿ ಕೂಡ ಬೆಂಕಿಗೆ ಆಹುತಿಯಾಯಿತು. ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಬೆಂಕಿ ತಹ ಬದಿಗೆ ಬರಲಿಲ್ಲ.ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.