ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ( Tumkuru University ) ಕ್ರೀಡಾ ವಸತಿ ನಿಲಯದ ಅಡುಗೆ ಕೋಣೆಯ ಪಕ್ಕದಲ್ಲಿಯೇ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡದಿಂದಾಗಿ ಅಪಾರ ಪ್ರಮಾಣದ ಸಾಮಗ್ರಿಗಳು ಬೆಂಕಿಗೆ ಅಹುತಿಯಾಗಿರೋದಾಗಿ ತಿಳಿದು ಬಂದಿದೆ.
ತುಮಕೂರಿನಲ್ಲಿರುವಂತ ತುಮಕೂರು ವಿವಿಯ ಕ್ರೀಡಾ ವಸತಿ ನಿಲಯದ ಹಾಸ್ಟೆಲ್ ಅಡುಗೆ ಮನೆಯ ಪಕ್ಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದಾಗಿ ಅಪಾರ ಪ್ರಮಾಣದ ಕ್ರೀಡಾ ಸಾಮಗ್ರಿ ಸುಟ್ಟು ಭಸ್ಮವಾಗಿರೋದಾಗಿ ಹೇಳಲಾಗುತ್ತಿದೆ.
ಬೆಂಕಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಅನಾಹುತ, ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿರುವಂತ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸೋ ಕಾರ್ಯದಲ್ಲಿ ತೊಡಗಿದ್ದಾವೆ.
ಅಗ್ನಿ ಆಕಸ್ಮಿಕಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗುತ್ತಿದೆ. ಬೆಂಕಿಯನ್ನು ಹತೋಟಿಗೆ ತಂದ ನಂತ್ರ ಪರಿಶೀಲನೆಯ ಬಳಿಕ ಖಚಿತ ಮಾಹಿತಿ ತಿಳಿದು ಬರಬೇಕಿದೆ.
ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ