ಬೆಂಗಳೂರು : ಬೆಂಗಳೂರಿನಲ್ಲಿ ಪಟಾಕಿ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು ಅನಧಿಕೃತ ಅಂಗಡಿಗಳನ್ನು ಸೀಜ್ ಮಾಡಿದ್ದಾರೆ.
ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಹೆಬ್ಬಗೋಡಿ ಮುಖ್ಯ ರಸ್ತೆಯಲ್ಲಿರುವ ಪಟಾಕಿ ಅಂಗಡಿ ಮೇಲೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಲೈಸೆನ್ಸ್ ಇಲ್ಲದೇ ಮಾರುತ್ತಿದ್ದ ಪಟಾಕಿ ಅಂಗಡಿಯನ್ನು ಬಂದ್ ಮಾಡಿ ಮಾಲೀಕರ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ.
ಅಗ್ನಿಶಾಮಕ ದಳದ ಅಧಿಕಾರಿ ನಾಗೇಶ್ ನೇತೃತ್ವದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಲೈಸೆನ್ಸ್ ಇಲ್ಲದೇ ಮಾರುತ್ತಿದ್ದ ಪಟಾಕಿ ಅಂಗಡಿಯನ್ನು ಬಂದ್ ಮಾಡಿ ಮಾಲೀಕರ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ಜಿಲ್ಲಾಧಿಕಾರಿ ನಕಲು ಸಹಿ ಬಳಕೆ ಮಾಡಿ ನಕಲು ಲೈಸೆನ್ಸ್ ಗಳನ್ನು ಸೃಷ್ಟಿಮಾಡಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದರು ಎನ್ನಲಾಗಿದೆ.