ಬೆಂಗಳೂರು : ಬೆಂಗಳೂರಿನ ಮೆಜೆಸ್ಟಿಕ್ ನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು (ಡಿ.6) ನಡೆದಿದೆ.

ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಟರ್ಮಿನಲ್ -1 ರ ಪವರ್ ರೂಮ್ ನಲ್ಲಿಬೆಂಕಿಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅಪಾಯಗಳಾದ ಬಗ್ಗೆ ವರದಿಯಾಗಿಲ್ಲ. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ದೊಡ್ಡ ಅವಘಡ ತಪ್ಪಿದೆ.

ಕೂಡಲೇ ಸಾರಿಗೆ ಸಿಬ್ಬಂದಿ Fire Extinguisher ಬಳಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ, . ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share.
Exit mobile version