ಬೆಂಗಳೂರು : ನಗರದ ಕಮರ್ಷಿಯಲ್ ಸ್ಟ್ರೀಟ್ ಬಳಿಯ ಪ್ಯಾಲೇಸ್ ಮಾಲ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದೆ.
40ಕ್ಕೂ ಹೆಚ್ಚು ಬಟ್ಟೆ ಅಂಗಡಿಗಳಿರುವ ಪ್ಯಾಲೇಸ್ ಮಾಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ, ಬಟ್ಟೆಗಳನ್ನು ಹೊರ ತಂದಿದ್ದಾರೆ. ಕ್ಷಣಮಾತ್ರದಲ್ಲಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಬೆಂಕಿ ನಂದಿಸಲಾಯಿತು. ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ ಎಂದು ಮಾಹಿತಿ ಲಭ್ಯವಾಗಿದೆ