ಬೆಂಗಳೂರು: ಬಿಡದಿಯ ಬಳಿಯಲ್ಲಿ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ಗಾಯಗೊಂಡು ರಿಕ್ಕಿ ರೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಪ್ರಕರಣವನ್ನು ರದ್ದುಗೊಳಿಸುವಂತೆ ಮುತ್ತಪ್ಪ ರೈ ಪತ್ನಿ ಅನುರಾಧಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಆಸ್ತಿಯ ವಿಚಾರವಾಗಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿರುವಂತ ರಿಕ್ಕಿ ರೈ, ಅಲ್ಲಿಂದಲೇ ಹೇಳಿಕೆ ನೀಡಿ, ಈ ಘಟನೆಗೆ ನನ್ನ ಚಿಕ್ಕಮ್ಮನೇ ಕಾರಣ ಎಂಬುದಾಗಿ ಆರೋಪಿಸಿದ್ದರು. ಅವರ ಹೇಳಿಕೆ ಆಧರಿಸಿ, ಮುತ್ತಪ್ಪ ರೈ ಪತ್ನಿ ಅನುರಾಧ ವಿರುದ್ಧ ಕೇಸ್ ದಾಖಲಾಗಿತ್ತು.
ಈ ಪ್ರಕರಣಕ್ಕೆ ಮಧ್ಯಂತ ತಡೆ ನೀಡುವಂತೆ, ಪ್ರಕರಣ ರದ್ದು ಮಾಡುವಂತೆ ಮುತ್ತಪ್ಪ ರೈ ಪತ್ನಿ ಅನುರಾಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದಂತ ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.
Gold Price Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: 1 ಲಕ್ಷ ತಲುಪಿದ 10 ಗ್ರಾಂ ಚಿನ್ನದ ಬೆಲೆ
ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್