ಬೆಂಗಳೂರು: ಈಗಾಗಲೇ ದೇಶದಲ್ಲಿ ಕಾಣಿಸಿಕೊಂಡಿರುವಂತ ಮಂಕಿಪಾಕ್ಸ್ ಪ್ರಕರಣ ( Monkeypox Case ), ಕರ್ನಾಟಕಕ್ಕೂ ಕಾಲಿಟ್ಟಿದೆ. ರಾಜ್ಯದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಕೇಸ್ ಇಂದು ಪತ್ತೆಯಾಗಿದೆ ಎನ್ನಲಾಗಿದೆ.
ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಈ ಕುರಿತಂತೆ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಆಫ್ರಿಕಾ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಲಕ್ಷಣಗಳಿರೋದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಅವರನ್ನು ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಸೂಚನೆ ನೀಡಿದಂತೆ 72 ಗಂಟೆಗಳ ಮಧ್ಯಂತರದಲ್ಲಿ 2 ಬಾರಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದಿದೆ.
BIG NEWS: ಸದ್ಯದಲ್ಲೇ SDPIನಂತಹ ಸಂಘಟನೆಗಳ ನಿಷೇಧಿಸುವ ಬಗ್ಗೆ ಸರ್ಕಾರ ಚರ್ಚಿಸಿ ಕ್ರಮ – ಗೃಹ ಸಚಿವ ಅರಗ ಜ್ಞಾನೇಂದ್ರ
ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್ ಅವರು ಮಾಹಿತಿ ನೀಡಿದ್ದು, ಜುಲೈ.4ರಂದು ಆಫ್ರಿಕಾದಿಂದ ಬೆಂಗಳೂರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳೋದಕ್ಕೆ ಅವರು ಬಂದಿದ್ದರು. ಅವರ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳಿದ್ದವು. ಹೀಗೆ ಮಂಕಿಪಾಕ್ಸ್ ಗುಣಲಕ್ಷಣಗಳಿದ್ದ ಕಾರಣ, ಹೆಚ್ಚಿನ ಪರೀಕ್ಷೆ ನಡೆಸಲಾಗುತ್ತಿದೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ.