ಕಲಬುರಗಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಹಲವು ಮಂದಿ ಬಿಸಿಲಿನಿ ತಾಪಕ್ಕೆ ಸುಸ್ತಾಗುತ್ತಿದ್ದಾರೆ. ಈ ನಡುವೆ ನರೇಗಾ ಕೆಲಸ ಮಾಡುವಾಗ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದಣ್ಣೂರಿನಲ್ಲಿ ನಡೆದಿದೆ. ನರೇಗಾ ಕೂಲಿ ಕೆಲಸ ಮಾಡುವಾಗ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದು, ಬಿಸಿಲಿನ ತಾಪದಿಂದ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರುವ ಬಗ್ಗೆ ಅವರ ಪತ್ನಿ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ನಡುವೆ , ಶರಣಪ್ಪ ಸಮಗಾರ ಮರಣೋತ್ತರ ಪರೀಕ್ಷೆ ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ಘಟನೆ ಸಂಬಂಧ ಕಲಬುರಗಿ ಜಿಲ್ಲೆಯ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.