ದಕ್ಷಿಣಕನ್ನಡ : 3ನೇ ಬಾರಿ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಪದಗ್ರಹಣ ಸ್ವೀಕಾರದ ನಂತರ ಮಂಗಳೂರಿನ ಬೋಳಿಯಾರುನಲ್ಲಿ ವಿಜಯೋತ್ಸವದ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿದ ಐವರು ಮುಸ್ಲಿಂ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹೌದು ನಿನ್ನೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸಿದರು. ಈ ಒಂದು ಸಂತೋಷದ ಘಳಿಗೆಯಲ್ಲಿ ಮಂಗಳೂರಿನ ಬೋಳಿಯಾರುನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದರು ಈ ವೇಳೆ ಬಿಜೆಪಿಯ ಇಬ್ಬರು ಕಾರ್ಯಕರ್ತರಿಗೆ ಚಾಕು ಇರಿದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಸ್ಲಿಂನ ಐವರನ್ನು ಬಂಧಿಸಲಾಗಿದೆ.
ಬಂಧಿತರನ್ನು ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್ (35), ಸವಾದ್(18) ಹಾಗೂ ಹಫೀಝ್ (24) ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಹಲ್ಲೆಗೆ ಒಳಗಾದವರನ್ನು ಹರೀಶ್ (41) ಹಾಗೂ ನಂದಕುಮಾರ್ (24)ಎಂದು ಗುರುತಿಸಲಾಗಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ಬಾರ್‌ನ ಮುಂಭಾಗದಲ್ಲಿ ಅಳವಡಿಕೆ ಮಾಡಿದ್ದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಈ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೋಳಿಯಾರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡುತ್ತಾ ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗುತ್ತಾ ಬೈಕ್‌ನಲ್ಲಿ ಹೋಗಿದ್ದಾರೆ. ಅವರನ್ನು ಹಿಂಬಾಲಿಸಿಕೊಂಡು ಸುಮಾರು 20-25 ಜನರ ಮುಸ್ಲಿಮರ ಗುಂಪು ಬೆನ್ನಟ್ಟಿ ಇಬ್ಬರಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲಿಯೇ ಸಿಸಿಟಿವಿ ಕ್ಯಾಮೆರಾ ಅಧರಿಸಿ ಕೊಣಾಜೆ ಪೊಲೀಸರು ಐವರು ಮುಸ್ಲಿಂ ಆರೋಪಿಗಳನ್ನು ಬಂಧಿಸಿದ್ದಾರೆ.