ಜಬಲ್ಪುರ : ಟ್ರ್ಯಾಕ್ಟರ್ ಪಲ್ಟಿಯಾಗಿ ಐವರು ಮಕ್ಕಳು ಸಾವನ್ನಪ್ಪಿದ್ದು, ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.
ಅತಿ ವೇಗದಿಂದಾಗಿ ಟ್ಯಾಕ್ಟರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಚಾರ್ಗವಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಟಿನೆಟ್ಟಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಅನ್ನು 18 ವರ್ಷದ ಅಪ್ರಾಪ್ತ ಬಾಲಕ ಧರ್ಮೇಂದ್ರ ಠಾಕೂರ್ ಓಡಿಸುತ್ತಿದ್ದ ಎಂದು ಹೇಳಲಾಗುತ್ತಿದೆ.