ಬೆಂಗಳೂರು : ಐದು ಜನ ರೈತರಿಗೆ ಅಮಿತ್ ಶಾ ಭೇಟಿಗೆ ಅವಕಾಶ ನೀಡುವುದಾಗಿ ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದ್ದಾರೆ.
ರೈತರೊಂದಿಗೆ ಸಂಧಾನ ಸಭೆ ನಡೆಸಿದ ಸಚಿವರು ಕೇಂದ್ರ ಸಚಿವ ಅಮಿತ್ ಷಾ ಅವರನ್ನು ರೈತರಿಗೆ ಭೇಟಿ ಮಾಡಿಸುವುದಾಗಿ ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು.
ಮಂಡ್ಯ ಜಿಲ್ಲೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದೆ ಹೇಳಿಕೊಳ್ಳಲು ಐದು ಜನ ರೈತರನ್ನು ಅಮಿತ್ ಶಾ ಅವರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುತ್ತೇನೆ ಎಂದು ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ವಿವಿಧ ಸಂಘಟನೆಗಳ ರೈತರು ಮುಖಂಡರುಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.ನಾವೆಲ್ಲರೂ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದವರು ರೈತರ ಸಮಸ್ಯೆಗಳನ್ನು ಕುರಿತು ಜನವರಿ 07ರೋಳಗೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ ರಾಜ್ಯ ಸರ್ಕಾರದಿಂದ ಬಗೆಹರಿಸುವಂತಹ ಸಮಸ್ಯೆಗಳನ್ನು ಬಗೆಹರಿಸಿ ಕೊಡುತ್ತೇವೆ ಎಂದು ಹೇಳಿದರು.
ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯ ಜಿಲ್ಲೆಗೆ ಆಗಮಿಸಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಸಚಿವರ ಮುಂದೆ ಹೇಳಿಕೊಳ್ಳಲು ಅವಕಾಶ ಮಾಡಿಕೊಡುತ್ತೇನೆ ಎಂದು ರೈತರಿಗೆ ಭರವಸೆ ನೀಡಿದರು.
ಜಿಲ್ಲೆಯಲ್ಲಿ ಹಲವಾರು ದಿನಗಳಿಂದ ವಿವಿಧ ಸಂಘಟನೆಗಳು ಒಗ್ಗೂಡಿ ರೈತರು ತಮ್ಮ ಬೇಡಿಕೆಯನ್ನು ಇಟ್ಟು ತಮಗೆ ಆಗಿರುವ ಅನ್ಯಾಯ ವನ್ನು ಸರಿಪಡಿಸಿಕೊಳ್ಳಬೇಕು ಎಂಬಂತಹ ದೃಷ್ಟಿಯಿಂದ ಮಾಡುತ್ತಿದ್ದಂತಹ ಪ್ರತಿಭಟನೆಯನ್ನು ಕೈಬಿಡಲಾಯಿತು.ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್, ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಹಾಗೂ ಜಿಲ್ಲೆಯ ವಿವಿಧ ಸಂಘಟನೆಯ ರೈತ ಮುಖಂಡರುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.