ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿದ ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆಯೂ ಚಿಕಿತ್ಸೆಯನ್ನು ಪಡೆಯುತ್ತಿದ್ದಂತ ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇದೀಗ ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದ ನಂತ್ರ ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ 25 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಅವರ ಆರೋಗ್ಯದಲ್ಲಿ ದಿನೇ ದಿನೇ ಚೇತರಿಕೆ ಕಾಣದೇ, ಗಂಭೀರ ಸ್ಥಿತಿಯನ್ನು ತಲುಪಿತ್ತು. ಇಂತಹ ಅವರು ಇಂದು ಸಂಜೆ 4.15ರ ವೇಳೆಗೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಇಂದು ನಿಧನರಾಗಿರುವಂತ ನಟ ಕೆ.ಶಿವರಾಮ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದ ಬಳಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತ್ಯ ಸಂಸ್ಕಾರವನ್ನು ನಾಳೆ ಅಂತಿಮ ದರ್ಶನದ ಬಳಿಕ ಎಲ್ಲಿ ನಡೆಸಬೇಕು ಎನ್ನುವ ಬಗ್ಗೆ ಕುಟುಂಬಸ್ಥರು ನಿರ್ಧರಿಸಲಿದ್ದಾರೆ.
ಈ ಬಗ್ಗೆ ಕೆ.ಶಿವರಾಮ್ ಅಳಿಯ ಪ್ರದೀಪ್ ಮಾಹಿತಿ ಹಂಚಿಕೊಂಡಿದ್ದು, ಶಿವರಾಮ್ ಅವರ ಪತ್ನಿ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗಿದ್ದಾರೆ. ಅವರು ಬಂದ ನಂತ್ರ ಮಾವನ ಅಂತ್ಯಕ್ರಿಯೆಯನ್ನು ಎಲ್ಲಿ ನಡೆಸಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
UPDATE BREAKING: ಮಾಜಿ IAS ಅಧಿಕಾರಿ, ನಟ ಕೆ.ಶಿವರಾಮ್ ವಿಧಿವಶ: ಕುಟುಂಬಸ್ಥರಿಂದ ಅಧಿಕೃತ ಮಾಹಿತಿ
‘ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: ‘ಪಂಚಾಯತ್ ರಾಜ್ ಇಲಾಖೆ’ಯ ‘2022 ಖಾಲಿ ಹುದ್ದೆ’ ಭರ್ತಿಗೆ ಪ್ರಕ್ರಿಯೆ ಆರಂಭ