ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಭಾರಿ ಮೊತ್ತದ ಹಣದೊಂದಿಗೆ ಬಂಧನಕ್ಕೊಳಗಾದ ಜಾರ್ಖಂಡ್ ಕಾಂಗ್ರೆಸ್ನ ಮೂವರು ಶಾಸಕರು ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಹೌರಾ ಗ್ರಾಮೀಣ ಎಸ್ಪಿ ಸ್ವಾತಿ ಭಂಗಾಲಿಯಾ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.

ಜಾರ್ಖಂಡ್ ಕಾಂಗ್ರೆಸ್ ಶಾಸಕರು ಸೇರಿದಂತೆ ಎಲ್ಲಾ ಐದು ಜನರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ.

BREAKING NEWS: ‘ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ’ಯ ‘ಮರು ಮೌಲ್ಯ ಮಾಪನ, ಮರುಏಣಿಕೆ ಫಲಿತಾಂಶ’ ಪ್ರಕಟ | Karnataka Second PU Results

ಇದಕ್ಕೂ ಮುನ್ನ, ಕಾಂಗ್ರೆಸ್ ಮೂವರು ಜಾರ್ಖಂಡ್ ಶಾಸಕರನ್ನು ಅಮಾನತುಗೊಳಿಸಿತ್ತು ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ತನ್ನ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿತ್ತು.

ಆದಾಗ್ಯೂ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಜೊತೆಗಿನ ಮೈತ್ರಿ ಸರ್ಕಾರವು “ಸಂಪೂರ್ಣವಾಗಿ ಸುರಕ್ಷಿತ ಮತ್ತು ಸ್ಥಿರವಾಗಿದೆ” ಮತ್ತು ತನ್ನ ಅವಧಿಯನ್ನು ಪೂರ್ಣಗೊಳಿಸುತ್ತದೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

BREAKING NEWS: ರಾಜ್ಯದ ಮೂರು ಜಿಲ್ಲೆಯಲ್ಲಿ ಎನ್ಐಎ ಅಧಿಕಾರಿಗಳ ದಾಳಿ: ಮೂವರು ಶಂಕಿತ ಉಗ್ರರು ಅರೆಸ್ಟ್

Share.
Exit mobile version