ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅನಾಹುತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಮನೆಯೊಂದರಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಮನೆಯಲ್ಲಿದ್ದಂತ ಐವರು ತೀವ್ರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಗಾಯಗೊಂಡಿರುವಂತವರನ್ನು ನೇಪಾಳ ಮೂಲದ ಕುಟುಂಬದವರು ಎಂಬುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಸಭಾ ಚುನಾವಣೆ ಮತಏಣಿಕೆ: ರಾಜ್ಯಾಧ್ಯಂತ ಜೂ.04 ರಿಂದ 05 ರಂದು 144 ಸೆಕ್ಷನ್ ಅಡಿ ‘ನಿಷೇದಾಜ್ಞೆ’ ಜಾರಿ
ಗೂಗಲ್ ನಿಂದ ಮಲೇಷ್ಯಾದಲ್ಲಿ 2 ಬಿಲಿಯನ್ ಡಾಲರ್ ಹೂಡಿಕೆ, 2030ರ ವೇಳೆಗೆ 26,000 ಉದ್ಯೋಗ ಸೃಷ್ಟಿ!