ಕೋಲಾರ : ಎರಡು ಕಾರುಗಳ ಮಧ್ಯೆ ಭೀಕರವಾದ ಅಪಘಾತ ಸಂಭವಿಸಿ, ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವರಾಯಸಮುದ್ರ ಗೇಟನಲ್ಲಿ ನಡೆದಿದೆ.
ಎರಡು ಕಾರುಗಳ ಮಧ್ಯ ಪರಸ್ಪರ ಡಿಕ್ಕಿಯಾಗಿ ಐವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವರಾಯಸಮುದ್ರ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಐವರು ಗಾಯಾಳುಗಳು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಕುರಿತಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.